ADVERTISEMENT

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ; ಗಾಂಜಾ ಜಪ್ತಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 4:23 IST
Last Updated 8 ಅಕ್ಟೋಬರ್ 2020, 4:23 IST
ಗಾಂಜಾ ಗಿಡದ ಸಮೇತ ಆರೋಪಿಯನ್ನು ಬಂಧಿಸಿದ ಅಧಿಕಾರಿಗಳು. ಎ.ಎಲ್‌.ನಾಗೇಶ್‌ ಹಾಗೂ ಮೋಹನ್‌ ಕುಮಾರಿ ಚಿತ್ರದಲ್ಲಿದ್ದಾರೆ
ಗಾಂಜಾ ಗಿಡದ ಸಮೇತ ಆರೋಪಿಯನ್ನು ಬಂಧಿಸಿದ ಅಧಿಕಾರಿಗಳು. ಎ.ಎಲ್‌.ನಾಗೇಶ್‌ ಹಾಗೂ ಮೋಹನ್‌ ಕುಮಾರಿ ಚಿತ್ರದಲ್ಲಿದ್ದಾರೆ   

ಬೆಂಗಳೂರು: ಡ್ರಗ್ಸ್ ವಿರುದ್ಧ ಅಬಕಾರಿ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಗಾಂಜಾ ಮಾರಾಟ ಆರೋಪದಡಿ ವಿಜಯೇಂದ್ರ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.

‘ಬನ್ನೇರುಘಟ್ಟದ ನಿವಾಸಿ ವಿಜಯೇಂದ್ರ, ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದ. ನಂತರ ಅವುಗಳನ್ನು ಕತ್ತರಿಸಿ ಒಣಗಿಸಿ ಮಾರಾಟ ಮಾಡುತ್ತಿದ್ದ’ ಎಂದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಬೆಂಗಳೂರು ನಗರ ಅಬಕಾರಿ ಪೊಲೀಸರು, ಆರೋಪಿಯನ್ನು ಬಂಧಿಸಿ ₹ 40 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಬೆಂಗಳೂರು ಹಾಗೂ ಇತರೆ ನಗರಗಳಲ್ಲಿ ಪರಿಚಿತ ಗ್ರಾಹಕರಿಗೆ ಆರೋಪಿ ಗಾಂಜಾ ಮಾರುತ್ತಿದ್ದ’ ಎಂದರು.

ADVERTISEMENT

ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಲ್‌. ನಾಗೇಶ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಮೋಹನ್‌ಕುಮಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.