ಬೆಂಗಳೂರು: ಕೃತಕ ಬುದ್ದಿಮತ್ತೆ, ಮಷಿನ್ ಲರ್ನಿಂಗ್, ಬಿಬಿಎ, ಬಿಸಿಎ, ಬಿ.ಕಾಂ ಕೋರ್ಸ್‌ಗಳ ಜೊತೆಗೆ ವಿದೇಶಿ ಭಾಷೆಗಳ ಕಲಿಕೆಗೂ ಅವಕಾಶ ಇದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.
ಮಲ್ಲೇಶ್ವರ ಬಡಾವಣೆಯಲ್ಲಿರುವ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದರು.
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಸ್ವಯಂ ಹಣಕಾಸು ನಿರ್ವಹಣೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜು ಜ್ಞಾನಾರ್ಜನೆಯ ಜೊತೆಗೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದ ಹಾದಿಯಲ್ಲಿ ಸಾಗುತ್ತಿರುವುದು ಸಂತಸದ ಸಂಗತಿ’ ಎಂದರು.
ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಲಾ ವಿಭಾಗದ ಡೀನ್ ಜ್ಯೋತಿ ವೆಂಕಟೇಶ್ ವಾರ್ಷಿಕ ವರದಿ ಮಂಡಿಸಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಯು.ಟಿ.ಫರ್ಜಾನಾ ಮತ್ತು ಮಾಲಾ ಮೇರಿ ಮಾರ್ಟಿನಾ ಅವರನ್ನು ಸನ್ಮಾನಿಸಲಾಯಿತು. ಕುಲಸಚಿವರಾದ ಟಿ.ಜವರೇಗೌಡ, ಸಿ.ಎಸ್.ಆನಂದ ಕುಮಾರ್, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮೀ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.