ADVERTISEMENT

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 9:34 IST
Last Updated 22 ಡಿಸೆಂಬರ್ 2021, 9:34 IST

ಬೆಂಗಳೂರು: ಮತಾಂತರ ನಿಷೆಧ ಕಾಯ್ದೆಯನ್ನು ಖಂಡಿಸಿ ದಲಿತ, ಮುಸ್ಲಿಂ, ಕ್ರೈಸ್ತ ಸಮುದಾಯದ 15 ಕ್ಕೂ ಹೆಚ್ಚು ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಂವಿಧಾನ ವಿರೋಧಿಯಾಗಿರುವ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ADVERTISEMENT

'ನಮ್ಮ ಮೂಲಭೂತ ಹಕ್ಕಿನ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ'. 'ನಾವು ನಂಬಿರುವ ದೇವರನ್ನು ಪೂಜಿಸುವುದು ನಮ್ಮ ಹಕ್ಕು' ಎಂಬ ಫಲಕಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.