ಡಿ.ಕೆ ಶಿವಕುಮಾರ್
- ಫೇಸ್‌ಬುಕ್ ಚಿತ್ರ
ಬೆಂಗಳೂರು: ‘ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಒ ಪ್ಲಾಂಟ್) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸಲು ಸೂಕ್ತ ಆದೇಶ ಹೊರಡಿಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, ‘ನಗರದ ನಾಗರಿಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಬೇಸಿಗೆ ಆರಂಭವಾಗುತ್ತಿದ್ದು, ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಒ ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮೂಲಕವೇ ಪೂರೈಸಬೇಕಾಗುತ್ತದೆ. ನೀರು ಸರಬರಾಜು ವಿಷಯದಲ್ಲಿ ಎರಡೂ ಸಂಸ್ಥೆಗಳ ನಡುವೆ ಸಮನ್ವಯ ಕೊರತೆ ಉಂಟಾದರೆ ನಾಗರಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ, ಬಿಬಿಎಂಪಿಯಿಂದ ಆರ್.ಒ ಘಟಕಗಳನ್ನು ಜಲಮಂಡಳಿಗೆ ಹಸ್ತಾಂತರಸಲು ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.