ADVERTISEMENT

ಜನತಾ ಬಜಾರ್ ಕಟ್ಟಡ ತೆರವುಗೊಳಿಸದಂತೆ ಆದೇಶ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 20:32 IST
Last Updated 22 ಮಾರ್ಚ್ 2019, 20:32 IST

ಬೆಂಗಳೂರು: ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಜನತಾ ಬಜಾರ್‌ (ಏಷಿಯಾಟಿಕ್ ಬಿಲ್ಡಿಂಗ್) ಕಟ್ಟಡ ತೆರವುಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಈ ಕುರಿತಂತೆ ಸ್ವಯಂ ಸೇವಾ ಸಂಸ್ಥೆ ‘ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್‌ ಕಲ್ಚರಲ್ ಹೆರಿಟೇಜ್’ ಪ್ರತಿನಿಧಿ ಡಾ.ಮೀರಾ ಅಯ್ಯರ್‌ ಸಲ್ಲಿಸಿರುವ ಸಾರ್ಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೋರಿಕೆ ಏನು?: ‘ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು (ಬಿಡಿಎ) ತನ್ನ ಪರಿಷ್ಕೃತ ಮಾಸ್ಟರ್ ಪ್ಲಾನ್‌ನಲ್ಲಿ ಜನತಾ ಬಜಾರ್ ಅನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದೆ. ಆದ್ದರಿಂದ, ಮಾಸ್ಟರ್ ಪ್ಲಾನ್ ಅಂತಿಮವಾಗುವವರೆಗೆ ಕಟ್ಟಡ ತೆರವು ಮಾಡದಂತೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.