ಬೆಂಗಳೂರು: ಕಾವೇರಿ ಆಸ್ಪತ್ರೆಯಿಂದ 760ಕ್ಕೂ ಹೆಚ್ಚು ಅಂಗಾಂಗ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈಗ ಹೃದಯ ಕಸಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಅಗಸ್ಟ್ 13ರಂದು ಅಂಗಾಂಗ ದಾನದ ಕುರಿತು ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್. ವಿಜಯಭಾಸ್ಕರನ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹ್ಯಾಂಡ್ ಓವರ್ ಹೋಪ್, ಗಿವ್ ವಿಥ್ ಗ್ರೇಸ್, ಲೈವ್ ಥ್ರೊ ಅದರ್ಸ್ ಎಂಬ ಪರಿಕಲ್ಪನೆ ಅಡಿಯಲ್ಲಿ ಸಾರ್ವಜನಿಕ ಅಂಗಾಂಗ ದಾನ ಜಾಗೃತಿ ಅಭಿಯಾನ ನಡೆಯಲಿದೆ. ನಮ್ಮ ಆಸ್ಪತ್ರೆಯು ದಾನಿಗಳ ನೋಂದಣಿ ಶಿಬಿರಗಳನ್ನೂ ಆಯೋಜಿಸಲಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.