ADVERTISEMENT

ಬಿಬಿಎಂಪಿ ಕಚೇರಿಗೆ ನುಗ್ಗಿ ಜೀವ ಬೆದರಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 21:21 IST
Last Updated 15 ಫೆಬ್ರುವರಿ 2020, 21:21 IST

ಬೆಂಗಳೂರು: ‘30ಕ್ಕೂ ಹೆಚ್ಚು ಮಂದಿ ಏಕಾಏಕಿ ಕಚೇರಿಗೆ ನುಗ್ಗಿ ಅಕ್ರಮ ಬಂಧನದಲ್ಲಿಟ್ಟು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿಸಹಾಯಕ ಕಂದಾಯ ಅಧಿಕಾರಿ (ವಿಜಯನಗರ) ಉಪ ವಿಭಾಗ (ಬಿಬಿಎಂಪಿ) ಕಚೇರಿ ನೌಕರರು ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.

‘ಸ್ವತ್ತಿನ ಕಡತ ಸಂಬಂಧ ವಿಚಾರಿಸುವ ನೆಪದಲ್ಲಿ 30ಕ್ಕೂ ಹೆಚ್ಚು ಮಂದಿ ಶುಕ್ರವಾರ ಸಂಜೆ 5ರ ಸುಮಾರಿಗೆ ಕಚೇರಿಯೊಳಗೆ ನುಗ್ಗಿದ್ದರು. ನೌಕರರ ಮೊಬೈಲ್‌ಗಳನ್ನು ಹಾಗೂ ಮಹಿಳಾ ಉದ್ಯೋಗಿಗಳ ವ್ಯಾನಿಟಿ ಬ್ಯಾಗ್‌ಗಳನ್ನೂ ಕಸಿದುಕೊಂಡಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಸಂಜೆ 5ರಿಂದ ರಾತ್ರಿ 10ರವರೆಗೆ ನೌಕರರನ್ನು ಕಚೇರಿಯೊಳಗೆ ಅಕ್ರಮ ಬಂಧನದಲ್ಲಿಟ್ಟಿದ್ದರು. ಹೊರಗೆ ಹೋಗಲು ಸಹ ಬಿಟ್ಟಿರಲಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಿ’ ಎಂದೂ ನೌಕರರು ಆಗ್ರಹಿಸಿದ್ದಾರೆ.

ADVERTISEMENT

‘ದೂರು ಪಡೆದು ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ: ‘ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ ನೌಕರರಿಗೆ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿ ನೌಕರರು, ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.