ADVERTISEMENT

ಹೊರವರ್ತುಲ ರಸ್ತೆ: ಸಂಚಾರ ಮಾರ್ಗ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 18:56 IST
Last Updated 17 ಸೆಪ್ಟೆಂಬರ್ 2025, 18:56 IST
<div class="paragraphs"><p>ಸಂಚಾರ ದಟ್ಟಣೆ </p></div>

ಸಂಚಾರ ದಟ್ಟಣೆ

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಎಚ್ಎಎಲ್‌ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣದ ಉದ್ದೇಶದಿಂದ ಸೆ.19ರಿಂದ 26ರ ವರೆಗೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ADVERTISEMENT

ನಿರ್ಬಂಧಿತ ರಸ್ತೆಗಳು: ಲೇ ಅರೇಬಿಯಾ, ಬಿರಿಯಾನಿ ಜೋನ್‌, ಕ್ರೋಮ ಜಂಕ್ಷನ್‌ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ – ಕಾಡು ಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ: ಮಹದೇವಪುರ ಕಾರ್ತಿಕ್‌ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್‌ ಮೂಲಕ ಮಾರತ್ತಹಳ್ಳಿ– ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರ ಬಳಿ ಸರ್ವಿಸ್‌ ರಸ್ತೆಗೆ ತೆರಳಿ ಮಾರತ್ತಹಳ್ಳಿಯ ಕಾಂತಿ ಸ್ವೀಟ್ಸ್‌ ಕೆಳಸೇತುವೆ ಬಳಿ ಯು–ಟರ್ನ್‌ ತೆಗೆದುಕೊಂಡು ಮಾರತ್ತಹಳ್ಳಿ ಸೇತುವೆ ಬಳಿ ಎಡಕ್ಕೆ ತಿರುಗಿ ಮುನ್ನೇನಕೊಳಲು, ಕಾಡುಬೀಸನಹಳ್ಳಿ ಜಂಕ್ಷನ್‌, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್‌ ರಸ್ತೆಯಲ್ಲಿ ಸಂಚರಿಸಬಹುದು.

ದೇವರಬೀಸನಹಳ್ಳಿ ಹಾಗೂ ಬೆಳ್ಳಂದೂರು ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಕಡ್ಡಾಯವಾಗಿ ಹೊರವರ್ತುಲ ರಸ್ತೆಯ ಮೂಲಕವೇ ಸಂಚರಿಸಬೇಕು ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಸಾಹಿಲ್‌ ಬಾಗ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.