ಆಟೊ
ಬೆಂಗಳೂರು: ಪ್ರಯಾಣ ದರ ಅಧಿಕ ವಸೂಲಿ ಮಾಡುತ್ತಿದ್ದ 22 ಆಟೊಗಳನ್ನು ಗುರುವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಬೆಂಗಳೂರು ಕೇಂದ್ರ, ಬೆಂಗಳೂರು ಪಶ್ಚಿಮ, ಬೆಂಗಳೂರು ಪೂರ್ವ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಜ್ಞಾನಭಾರತಿ, ದೇವನಹಳ್ಳಿ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್. ಪುರ, ಚಂದಾಪುರ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 125 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.