ADVERTISEMENT

ಭತ್ತದ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2018, 19:33 IST
Last Updated 14 ನವೆಂಬರ್ 2018, 19:33 IST

ಬೆಂಗಳೂರು: ಕೇಂದ್ರ ಸರ್ಕಾರ ಉತ್ತಮ ಗುಣಮಟ್ಟದ ಬೆಲೆಗೆ ಕ್ವಿಂಟಲ್‌ಗೆ ₹1,770 ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರ್ಕಾರ ಅದಕ್ಕಿಂತಲೂ ಕಡಿಮೆ ದರ ನಿಗದಿ ಮಾಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟೀಕಿಸಿದ್ದಾರೆ.

ರಾಜ್ಯದಲ್ಲಿ ಭತ್ತದ ಬೆಲೆ ಕುಸಿದಿರುವುದರಿಂದ ರೈತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಪ್ರತಿ ಕ್ವಿಂಟಲ್‌ ಭತ್ತಕ್ಕೆ ₹1,600 ಬೆಂಬಲ ಬೆಲೆ ಪ್ರಕಟಿಸಿದರು.

ಮುಖ್ಯಮಂತ್ರಿ ಪ್ರಕಟಿಸಿರುವ ಬೆಂಬಲ ಬೆಲೆ ಕಡಿಮೆ ಎಂದು ದೂರಿರುವ ಯಡಿಯೂರಪ್ಪ,ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಜತೆ ಸಮಾಲೋಚನೆ ನಡೆಸಬೇಕು. ಕೇಂದ್ರ ನಿಗದಿ ಮಾಡಿರುವ ಬೆಂಬಲ ಬೆಲೆಗಿಂತ ಹೆಚ್ಚು ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೇಂದ್ರ ಸರ್ಕಾರ ಭತ್ತ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ಸಾಮಾನ್ಯ ಗುಣಮಟ್ಟದ ಭತ್ತಕ್ಕೆ ₹1,750, ರಾಗಿಗೆ ₹ 1,900ರಿಂದ ₹2,897ರವರೆಗೆ ಬೆಂಬಲ ಬೆಲೆ ಹೆಚ್ಚಿಸಿದೆ. ಶೇ 52ರಷ್ಟು ಬೆಂಬಲ ಬೆಲೆ ಏರಿಕೆ ಮಾಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.