ADVERTISEMENT

ರವೀಂದ್ರ ಕಲಾಕ್ಷೇತ್ರದಲ್ಲಿ ಚಿತ್ರಕಲಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 19:54 IST
Last Updated 23 ನವೆಂಬರ್ 2025, 19:54 IST
ರವೀಂದ್ರ ಕಲಾಕ್ಷೇತ್ರ 
ರವೀಂದ್ರ ಕಲಾಕ್ಷೇತ್ರ    

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಲಾ ದರ್ಪಣ ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯಿಂದ ಮಕ್ಕಳಿಗಾಗಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಇದೇ 29ರಂದು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ.

ಈ ಸ್ಪರ್ಧೆಯು 8 ವರ್ಷದೊಳಗಿನ, 13 ವರ್ಷದೊಳಗಿನ ಹಾಗೂ 18 ವರ್ಷದೊಳಗಿನ ವಿಭಾಗದಲ್ಲಿ ನಡೆಯಲಿದೆ. ಭಾಗವಹಿಸಿದ ಎಲ್ಲರಿಗೂ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ಕೊಡಲಾಗುತ್ತದೆ. ವಿಜೇತರಿಗೆ ಟ್ರೋಫಿಯ ಜತೆಗೆ ನಗದು ನೀಡಲಾಗುತ್ತದೆ. 

ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ ಶಾಲಾ ತಂಡಗಳಿಗೆ ಸ್ಕೂಲ್ ಅವಾರ್ಡ್‌ಗಳನ್ನು ಕೊಡಲಾಗುತ್ತದೆ. ಆಸಕ್ತರು ಇದೇ 24ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಕಾರ್ಯದರ್ಶಿ ವಿನಾಯಕ ಪಾಟೀಲ ತಿಳಿಸಿದ್ದಾರೆ.

ADVERTISEMENT

ಮಾಹಿತಿಗೆ: 93806 71947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.