ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲಸಿದ್ದ ಪಾಕಿಸ್ತಾನದ ನಾಲ್ವರು ಪ್ರಜೆಗಳನ್ನು ಗಡೀಪಾರು ಮಾಡಲಾಗಿದೆ.
‘ಕೇಂದ್ರ ಸರ್ಕಾರದ ಸೂಚನೆಯಂತೆ ಅನಧಿಕೃತವಾಗಿ ವಾಸವಾಗಿರುವ ಪಾಕಿಸ್ತಾನದ ಪ್ರಜೆಗಳ ಪತ್ತೆ ಕಾರ್ಯವನ್ನು ಗುಪ್ತಚರ ವಿಭಾಗದ ಅಧಿಕಾರಿಗಳು ನಡೆಸಿದ್ದರು. ಕಾರ್ಯಾಚರಣೆ ವೇಳೆ ಬ್ಯುಸಿನೆಸ್ ವೀಸಾ, ಎಜುಕೇಷನ್ ವೀಸಾದ ಮೇಲೆ ಬಂದಿದ್ದ ನಾಲ್ವರು, ವೀಸಾದ ಅವಧಿ ಮುಕ್ತಾಯವಾದ ಮೇಲೂ ಅನಧಿಕೃತವಾಗಿ ರಾಜ್ಯದಲ್ಲೇ ನೆಲಸಿದ್ದು ಪತ್ತೆಯಾಗಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಅನಧಿಕೃತವಾಗಿ ವಾಸವಾಗಿದ್ದ ನಾಲ್ವರ ದಾಖಲಾತಿ ಪರಿಶೀಲನೆ ನಡೆಸಿ ಗಡುವಿನೊಳಗೆ ರಾಜ್ಯ ತೊರೆಯುವಂತೆ ಸೂಚನೆ ನೀಡಲಾಗಿತ್ತು. ಎರಡು ದಿನಗಳ ಹಿಂದೆಯೇ ರಾಜ್ಯದಿಂದ ಹೊರಟಿದ್ದ ಅವರು ಅಟ್ಟಾರಿ–ವಾಘಾ ಗಡಿ ತಲುಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಗಡಿಯಲ್ಲಿರುವ ಅಧಿಕಾರಿಗಳು ನಾಲ್ವರನ್ನೂ ಪಾಕಿಸ್ತಾನಕ್ಕೆ ಕಳುಹಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.