ADVERTISEMENT

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಶಂಕಿತ ಆರೋಪಿ ರಾಹುಲ್‌ ಆಪ್ತ– ಆರ್‌. ಅಶೋಕ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮಾರ್ಚ್ 2024, 16:56 IST
Last Updated 5 ಮಾರ್ಚ್ 2024, 16:56 IST
ಆರ್‌. ಅಶೋಕ್‌
ಆರ್‌. ಅಶೋಕ್‌   

ಬೆಂಗಳೂರು: 'ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಮೊಹಮ್ಮದ್ ಇಲ್ತಾಝ್ ಒಬ್ಬ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಆರ್‌.ಅಶೋಕ್‌, ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಶಂಕಿತ ಮೊಹಮ್ಮದ್ ಇಲ್ತಾಝ್ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರ ಅಪ್ತನಾಗಿದ್ದು, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಕೂಡ ರಾಹುಲ್ ಗಾಂಧಿ ಅವರ ಜೊತೆ ಪಾಲ್ಗೊಂಡಿದ್ದ’.

‘ಈ ಗಂಭೀರ ಪ್ರಕರಣದ ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಈ ದೋಸ್ತಿಯೇ ಕಾರಣಾನಾ? ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕರ್ನಾಟಕದ ಜನತೆಗೆ ಉತ್ತರಿಸಬೇಕು’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT