ADVERTISEMENT

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 15:56 IST
Last Updated 7 ಜುಲೈ 2025, 15:56 IST
<div class="paragraphs"><p>ಹಲ್ಲೆ</p></div>

ಹಲ್ಲೆ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಆಗ್ರಹಿಸಿದೆ.

ADVERTISEMENT

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ಭಜಂತ್ರಿ, ‘ನಗರದ ಗಾಂಧಿ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಲೆಮಾರಿ ಸಮುದಾಯದ ಮುಖಂಡರ ಸಭೆಯಲ್ಲಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಭಾಗವಹಿಸಿದ್ದರು. ಅಲೆಮಾರಿ ಸಮುದಾಯಗಳ ಪರ ಮಾತನಾಡಲು ಪ್ರಾರಂಭಿಸಿದ ವೇಳೆ, ಆರೋಪಿಗಳು ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಘಟನೆ ಮಾಜಿ ಸಚಿವ ಎಚ್. ಆಂಜನೇಯ ಅವರ ಸಮ್ಮುಖದಲ್ಲಿ ನಡೆದರೂ ಅವರು, ಹಲ್ಲೆ ತಡೆಯಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ರವಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷೆ ಪ್ರಭಾವತಿ, ಮುಖಂಡರಾದ ಗಂಗಾಧರ, ರಮೇಶ್ ಭಜಂತ್ರಿ, ಈರಣ್ಣ ಭಜಂತ್ರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.