ADVERTISEMENT

ಐವರಿಗೆ ಸಚಿವ ಸ್ಥಾನ ನೀಡಿವಂತೆ ಪಂಚಮಸಾಲಿ ಕಾರ್ಯಕಾರಿಣಿ ಸಭೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಮೇ 2023, 5:43 IST
Last Updated 24 ಮೇ 2023, 5:43 IST
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸಭೆಯಲ್ಲಿ ಮಾತನಾಡಿದರು. 
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸಭೆಯಲ್ಲಿ ಮಾತನಾಡಿದರು.    

ಬೆಂಗಳೂರು: ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸಿದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ ಒತ್ತಾಯಿಸಿದೆ.

ಮಂಗಳವಾರ ಇಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿ ಒಟ್ಟು ಐವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಿರ್ಣಯ ತೆಗೆದುಕೊಳ್ಳಲಾಯಿತು.

ಅಲ್ಲದೆ, ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಅಥವಾ ವಿರೋಧ ಪಕ್ಷದ ಸ್ಥಾನಕ್ಕೆ ಪಂಚಮಸಾಲಿ ಶಾಸಕರಿಗೆ ಅವಕಾಶ ನೀಡಬೇಕು ಎಂದು ಸಭೆ ಒತ್ತಾಯಿಸಿದೆ. ನೂತನ ಶಾಸಕರ ಅಭಿನಂದನೆ ಮತ್ತು ಮೀಸಲಾತಿ ಹಕ್ಕೊತ್ತಾಯ ಸಮಾರಂಭವನ್ನು ಕೂಡಲಸಂಗಮದಲ್ಲಿ ಜೂನ್‌ನಲ್ಲಿ ನಡೆಸಲು ತೀರ್ಮಾನಿಸಲಾಯಿತು.

ADVERTISEMENT

ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ ಕಾಶಪ್ಪನವರ, ಶಾಸಕರಾದ ವಿನಯ ಕುಲಕರ್ಣಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಜುಕಾಗೆ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಬಾಬಾ ಸಾಹೇಬ್ ಪಾಟೀಲ, ನಂದಿಹಳ್ಳಿ ಹಾಲಪ್ಪ  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.