ADVERTISEMENT

ಪಂಚಾಯಿತಿ ಸದಸ್ಯರು ಅತಿಥಿ ಶಿಕ್ಷಕರಾಗುವಂತಿಲ್ಲ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 5:08 IST
Last Updated 20 ಜೂನ್ 2023, 5:08 IST
ಅತಿಥಿ ಉಪನ್ಯಾಸಕರು
ಅತಿಥಿ ಉಪನ್ಯಾಸಕರು   

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆಯ ಆಯುಕ್ತ ಆರ್.ವಿಶಾಲ್‌ ಸ್ಪಷ್ಟನೆ ನೀಡಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ದೊಡ್ಡರಾಂಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಎಂ. ರಜನಿ ಅವರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳುವ ಬಗ್ಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಚಿಕ್ಕನಾಯಕನಹಳ್ಳಿ ಶಿಕ್ಷಣಾಧಿಕಾರಿಯವರು ಶಿಕ್ಷಣ ಇಲಾಖೆಯಿಂದ ಸ್ಪಷ್ಟೀಕರಣ ಕೇಳಿದ್ದರು.

ಇದಕ್ಕೆ ಉತ್ತರ ನೀಡಿರುವ ಅವರು, ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟಿರುವ ಯಾವುದೇ ಸ್ಥಳೀಯ ಅಥವಾ ಇತರ ಪ್ರಾಧಿಕಾರದಲ್ಲಿ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ ಸದಸ್ಯರಾಗಲು ಅನರ್ಹರಾಗುತ್ತಾರೆ ಎಂದು ತಿಳಿಸಿದೆ. 

ADVERTISEMENT

ಹಿಂದೆ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದಾಗ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು ಎಂದು ಅವರ ಜ್ಞಾಪನ ಪತ್ರ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.