ADVERTISEMENT

ವಕೀಲರ ನೇಮಕ ಬ್ಯಾಂಕ್ ವಿವೇಚನೆಗೆ ಬಿಟ್ಟದ್ದು: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 16:10 IST
Last Updated 10 ಡಿಸೆಂಬರ್ 2021, 16:10 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ಬೆಂಗಳೂರು: ‘ಬ್ಯಾಂಕಿನ ಪ್ಯಾನಲ್‌ ವಕೀಲರನ್ನು ನೇಮಕ ಮಾಡಿಕೊಳ್ಳುವುದು ಬ್ಯಾಂಕ್‌ನ ವಿವೇಚನೆಗೆ ಬಿಟ್ಟ ವಿಚಾರ. ಇಂತಹ ವಿಷಯಗಳಲ್ಲಿ ಕೋರ್ಟ್ ರಿಟ್‌ ಅರ್ಜಿಗಳನ್ನು ಪರಿಗಣಿಸಿ ಆದೇಶ ನೀಡಲು ಆಗದು’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ತಮ್ಮನ್ನು ಬ್ಯಾಂಕ್‌ ಪ್ಯಾನಲ್‌ನಿಂದ ತೆಗೆದು ಹಾಕಿದ್ದನ್ನು ಪ್ರಶ್ನಿಸಿ ವಕೀಲ ತಿಮ್ಮಣ್ಣ ಎಂಬುವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಇಂತಹ ವಿಷಯಗಳಲ್ಲಿ ರಿಟ್‌ ಕೋರ್ಟ್‌ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಇದೊಂದು ಕಕ್ಷಿದಾರ ಮತ್ತು ವಕೀಲರ ನಡುವಿನ ಸಂಬಂಧದಂತೆ. ಹೀಗಾಗಿ ಈ ವಿಚಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಆಗದು’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

‘ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನನಗೆ ಯಾವುದೇ ಮುನ್ಸೂಚನೆ ನೀಡದೆ ನನ್ನನ್ನು ಪ್ಯಾನಲ್‌ನಿಂದ ಕೈಬಿಟ್ಟಿದ್ದು, ಈ ಆದೇಶವನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.