ADVERTISEMENT

ಪತ್ರಿಕಾ ವಿತರಕರಾಗಿದ್ದ ಕಾಮಾಕ್ಷಿಪಾಳ್ಯ ನಿವಾಸಿ ಆರ್.ಭರತ್ ಸಾವು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 16:21 IST
Last Updated 9 ಆಗಸ್ಟ್ 2024, 16:21 IST
ಭರತ್
ಭರತ್   

ಬೆಂಗಳೂರು: ಪತ್ರಿಕಾ ವಿತರಕರಾಗಿದ್ದ ಕಾಮಾಕ್ಷಿಪಾಳ್ಯ ನಿವಾಸಿ ಆರ್.ಭರತ್ (33) ಅವರು ಶುಕ್ರವಾರ ನಿಧನರಾದರು.

ಜುಲೈ 31ರ ರಾತ್ರಿ 1.30 ರ ವೇಳೆ ರಹೇಜ ಪಾರ್ಕ್ ಬಳಿ ದ್ವಿಚಕ್ರ ವಾಹನದಲ್ಲಿ ಬರುವಾಗ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಅವರಿಗೆ ತಾಯಿ, ತಂದೆ ಇದ್ದಾರೆ. ಶುಕ್ರವಾರ ಅಂತ್ಯಕ್ರಿಯೆ ನೆರವೇರಿತು. ಭರತ್ ಅವರು  ‘ಪ್ರಜಾವಾಣಿ’ ಸೇರಿದಂತೆ ವಿವಿಧ ಪತ್ರಿಕೆಗಳ ವಿತರಕರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT