ADVERTISEMENT

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಎಚ್.ಎಂ.ಚಂದ್ರಶೇಖರ್

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 16:07 IST
Last Updated 10 ಏಪ್ರಿಲ್ 2025, 16:07 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೆ.ಆರ್.ಪುರ: ವಿದ್ಯಾರ್ಥಿಗಳ ಜೀವನ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಸಿಲಿಕಾನ್ ಸಿಟಿ ಕಾಲೇಜಿನ ಅಧ್ಯಕ್ಷ ಎಚ್.ಎಂ.ಚಂದ್ರಶೇಖರ್ ಹೇಳಿದರು.

ಕೆ.ಆರ್.ಪುರ ಸಮೀಪದ ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕೋತ್ಸವ ‘ಪರಂಪರ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಯುವ ಮನಸ್ಸುಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರು ಅಗತ್ಯವಿರುವ ಸಮರ್ಪಣೆ ಮತ್ತು ಬದ್ಧತೆಯ ಬಗ್ಗೆ ತಿಳಿಸಿದರು.

ಐಪಿಎಸ್ ಅಧಿಕಾರಿ ಪ್ರಭಾರಾವ್ ಅವರು ಹೆಚ್ಚುತ್ತಿರುವ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಭಾವ ಕುರಿತು ಹಾಗೂ ತಾಂತ್ರಿಕ ಪ್ರಗತಿಯ ತ್ವರಿತಗತಿಯ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಬ್ಬರೂ ವಿಕಸನಗೊಳ್ಳುತ್ತಿರುವ ಚಲನಶೀಲತೆಗೆ ತ್ವರಿತವಾಗಿ ಹೊಂದಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಹಿರಿಯ ಶಿಕ್ಷಣ ತಜ್ಞ ಮತ್ತು ತಂತ್ರಜ್ಞ ಪ್ರೊ.ಡಿ.ಎಸ್.ಚೌಹಾಣ್, ಕಾಲೇಜಿನ ನಿರ್ದೇಶಕ ಎಚ್.ಎಂ.ಮುಕುಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.