ADVERTISEMENT

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: ಕೈದಿಗಳ ಬಳಿ ಮೊಬೈಲ್, ಸಿಮ್ ಕಾರ್ಡ್ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 15:36 IST
Last Updated 4 ಜನವರಿ 2026, 15:36 IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ 
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ    

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಾಳಿ ನಡೆಸಿ ಪರಿಶೀಲಿಸಿದಾಗ ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪತ್ತೆಯಾಗಿವೆ.

‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ದ ಅಡಿ ಶನಿವಾರ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ ವೇಳೆ ಐದು ಮೊಬೈಲ್, ಆರು ಸಿಮ್ ಕಾರ್ಡ್, ಚಾರ್ಜರ್ ಕೇಬಲ್, ಇಯರ್ ಫೋನ್ ದೊರೆತಿದೆ.

ಕಾರಾಗೃಹ ಮುಖ್ಯ ಅಧೀಕ್ಷಕರ ದೂರಿನ ಮೇರೆಗೆ ಮೊಬೈಲ್ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುವನ್ನು ಕಾರಾಗೃಹದಲ್ಲಿ ಉಪಯೋಗಿಸಿದವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಅನಿರೀಕ್ಷಿತ ತಪಾಸಣೆ ವೇಳೆ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಗೆ ₹10 ಸಾವಿರ ನಗದು ಬಹುಮಾನ ಮತ್ತು ಪ್ರಶಂಸ ಪತ್ರ ನೀಡಿ ಗೌರವಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.