ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ–1ರಲ್ಲಿದ್ದ ಪರಿವಾರ ಮತ್ತು ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ (ಎಸ್.ಟಿ) ಪಟ್ಟಿಗೆ ಸೇರಿಸಿ ಸಮಾಜ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಈ ಎರಡೂ ಸಮುದಾಯಗಳ ಜನರಿಗೆ ಪರಿಶಿಷ್ಟ ಪಂಗಡಗಳ ಅಡಿಯಲ್ಲಿ ಜಾತಿ ಪ್ರಮಾಣಪತ್ರ ವಿತರಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಸಮುದಾಯದ ಜನರನ್ನು ಮಾತ್ರ ಈ ಹಿಂದೆ ಎಸ್.ಟಿ ಪಟ್ಟಿಗೆ ಸೇರಿಸಲಾಗಿತ್ತು. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ಧಿ ಸಮುದಾಯದ ಜನರಿಗೂ ಎಸ್.ಟಿ ಅಡಿಯಲ್ಲಿ ಜಾತಿ ಪ್ರಮಾಣಪತ್ರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.