ADVERTISEMENT

ಬೆಂಗಳೂರು: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 14:41 IST
Last Updated 16 ಫೆಬ್ರುವರಿ 2026, 14:41 IST
ಪವಿತ್ರಾಗೌಡ 
ಪವಿತ್ರಾಗೌಡ    

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

‘ಪುತ್ರಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು’ ಎಂದು ಪವಿತ್ರಾ ಅವರು ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಇದನ್ನು ತಿರಸ್ಕರಿಸಿದೆ.

ಪವಿತ್ರಾ ಅವರ ಜಾಮೀನು ಅರ್ಜಿಗೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ಜಾಮೀನು ಮಂಜೂರು ಮಾಡಬಾರದೆಂದು ಕೋರಿದರು. ಈ ಹಿಂದೆಯೂ ಪವಿತ್ರಾಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು.

ADVERTISEMENT

ಇದೇ ಪ್ರಕರಣದ 11ನೇ ಆರೋಪಿ ನಾಗರಾಜ್ ಅವರೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

‘ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ನಾನು ಹಾಜರಿರಬೇಕು’ ಎಂಬುದಾಗಿ ನಾಗರಾಜ್ ಅರ್ಜಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.