ಯಲಹಂಕ: ಅರಕೆರೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಈ.ಪವನ್‌ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಸ್.ಮಂಜುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಬುಧವಾರ ಚುನಾವಣೆ ನಡೆಯಿತು. ಒಟ್ಟು 22 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಪವನ್‌ಕುಮಾರ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಂಜಿನಮ್ಮ ಚೌಡಯ್ಯ, ಮಾಜಿ ಅಧ್ಯಕ್ಷರಾದ ಕೆ.ಆರ್.ತಿಮ್ಮೇಗೌಡ, ಲಕ್ಷ್ಮೀನಾರಾಯಣಗೌಡ, ಬಿ.ಸಿ.ಶಶಿಕುಮಾರ್, ಭಾಗ್ಯಮ್ಮ ಈಶ್ವರಾಚಾರ್, ಮುನಿಲಕ್ಷ್ಮಮ್ಮ ಪರಶುರಾಮ್, ಮಾಜಿ ಉಪಾಧ್ಯಕ್ಷರಾದ ಕೆ.ಎಂ.ಅರಸೇಗೌಡ, ನೇತ್ರಾವತಿ ಅಂಬರೀಶ್ ಬಾಬು, ಶಿಲ್ಪಾ ರಾಜಣ್ಣ, ಮಂಜುಳ ಅವರು ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.