ADVERTISEMENT

ಪೇಸಿಎಂ ಪೋಸ್ಟರ್‌: ವಕೀಲರ ವಿರುದ್ಧದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 4:31 IST
Last Updated 22 ಅಕ್ಟೋಬರ್ 2022, 4:31 IST
   

ಬೆಂಗಳೂರು:ಪೇಸಿಎಂ ಅಭಿಯಾನಕ್ಕೆ ಕರೆಕೊಟ್ಟ ಆರೋಪದಲ್ಲಿ ನೆಲ ಮಂಗಲದ ವಕೀಲರಿಬ್ಬರ ವಿರುದ್ಧ ಸಾರ್ವಜನಿಕ ಆಸ್ತಿ ಹಾನಿ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪಗೊಳಿಸಿದ ಕಾಯ್ದೆಯಡಿ ದಾಖಲಿಸಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೂ ಆದ ವಕೀಲ ಜೆ.ಎಸ್. ನಾರಾಯಣ ಗೌಡ ಹಾಗೂ ಕಾನೂನು ಘಟಕದ ಮುಖ್ಯಸ್ಥರೂ ಆಗಿರುವ ವಕೀಲ ವಿ. ರಾಮಕೃಷ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

‘ಅರ್ಜಿದಾರರು ಮೊಬೈಲ್ ಮೂಲಕ ಪೋಸ್ಟರ್‌ಗಳನ್ನು ಅಂಟಿಸುವಂತೆ ಬೇರೆಯರರಿಗೆ ಸೂಚಿಸಿದ್ದಾರೆ ಎಂದಮಾತ್ರಕ್ಕೆ ಅಪರಾಧ ಎನಿಸುವುದಿಲ್ಲ. ಕಾಯ್ದೆಯ ಅಡಿ ಅಪರಾಧವಾಗುವಂತಹ ಯಾವುದೇ ಕೃತ್ಯವನ್ನೂಅರ್ಜಿದಾರರು ಎಸಗಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಈ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಕೇವಲ ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಮಾತ್ರ ಸೀಮಿತವಾಗಿವೆ. ಇದೇ ಪ್ರಕರಣದ ಇತರ ಆರೋಪಿಗಳ ವಿರುದ್ಧದ ತನಿಖೆಯ ಮೇಲೆ ಈ ಆದೇಶ ಪರಿಣಾಮ ಬೀರುವುದಿಲ್ಲ’ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.