ADVERTISEMENT

'ಪೇ ಸಿಎಂ' ಪೋಸ್ಟರ್: ಕಾಂಗ್ರೆಸ್‌ನ ಇಬ್ಬರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 6:52 IST
Last Updated 22 ಸೆಪ್ಟೆಂಬರ್ 2022, 6:52 IST
ಪೇಸಿಎಂ ಪೋಸ್ಟರ್‌ಗಳನ್ನು ತೆರವುಗೊಳಿಸುತ್ತಿರುವ ಪೊಲೀಸರು | ಪಿಟಿಐ ಚಿತ್ರ
ಪೇಸಿಎಂ ಪೋಸ್ಟರ್‌ಗಳನ್ನು ತೆರವುಗೊಳಿಸುತ್ತಿರುವ ಪೊಲೀಸರು | ಪಿಟಿಐ ಚಿತ್ರ   

ಬೆಂಗಳೂರು: ಮುಖ್ಯಮಂತ್ರಿ‌ ಬಸವರಾಜ‌ ಬೊಮ್ಮಾಯಿ ಫೋಟೊ ಸಮೇತ 'ಪೇಸಿಎಂ (paycm)' ಎಂಬುದಾಗಿ ಪೋಸ್ಟರ್ ಅಂಟಿಸಿದ್ದ ಆರೋಪದಡಿ‌ ಕಾಂಗ್ರೆಸ್‌ನ ಇಬ್ಬರು ಕಾರ್ಯಕರ್ತರನ್ನು ಹೈಗ್ರೌಂಡ್ಸ್ ಠಾಣೆ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ನಾಯ್ಡು ಹಾಗೂ ಗಗನ್ ಎಂಬುವರನ್ನು ವಶಕ್ಕೆ ಪಡೆದಿರುವುದಾಗಿ ಗೊತ್ತಾಗಿದೆ.
ನಗರದ ಹಲವು ಪ್ರದೇಶಗಳ‌ ಬಸ್ ತಂಗುದಾಣ ಹಾಗೂ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಲಾಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

'ಸಿ.ಸಿ.ಟಿ.ವಿ‌ ಕ್ಯಾಮೆರಾ ಹಾಗೂ ಇತರೆ ಪುರಾವೆಗಳನ್ನು ಆಧರಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆದಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಕಾರ್ಯಕರ್ತರನ್ನು ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖಂಡರು, ಹೈಗ್ರೌಂಡ್ಸ್ ಠಾಣೆಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.