ದಾಬಸ್‌ಪೇಟೆ: ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೃಷ್ಣಕುಮಾರ್ ಶನಿವಾರಮುಸ್ಲಿಂಸಮುದಾಯದ ನಾಯಕರೊಂದಿಗೆಸಭೆನಡೆಸಿದರು.
‘ಶುಕ್ರವಾರದ ನಮಾಜ್ ಮಾಡಲು ಮಸೀದಿಗಳಲ್ಲಿ ಒಟ್ಟುಗೂಡಬಾರದು. ತಮ್ಮ ಮನೆಗಳಲ್ಲಿಯೇ ನಮಾಜ್ ಮಾಡಬೇಕು ಹಾಗೂ ಕೊರೊನಾ ಸೋಂಕಿನ ಸಂಬಂಧ ಆಶಾ ಕಾರ್ಯಕರ್ತೆಯರು, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳ ಹತ್ತಿರ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಸಹಕರಿಸಬೇಕು. ಯಾವುದೇ ರೀತಿಯ ಗೊಂದಲ ಸೃಷ್ಟಿಸದಂತೆ ಸಮುದಾಯದ ಜನರಿಗೆ ತಿಳಿಸಬೇಕು’ ಎಂದು ಮುಖಂಡರಿಗೆ ತಿಳಿಸಿದರು. ಸುಮಾರು 20ಕ್ಕೂ ಹೆಚ್ಚುಮುಸ್ಲಿಂನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.