
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಪೀಣ್ಯ ದಾಸರಹಳ್ಳಿ: ನೆಲಮಂಗಲ ಬಳಿಯ ದಾಸನಪುರದ ರಾಮ್‌ದೇವ್ ಚಿನ್ನಾಭರಣ ಅಂಗಡಿಯಲ್ಲಿ ಪಿಸ್ತೂಲ್ ತೋರಿಸಿ ದರೋಡೆ ನಡೆಸಲಾಗಿದೆ.
ಬೈಕ್‌ನಲ್ಲಿ ಬಂದಿದ್ದ ಮೂವರು ಕೃತ್ಯ ಎಸಗಿದ್ದಾರೆ. ಏಕಾಏಕಿ ಅಂಗಡಿಗೆ ನುಗ್ಗಿದ ದರೋಡೆಕೋರರು ಅಂಗಡಿಯಲ್ಲಿ ಸಿಕ್ಕಸಿಕ್ಕ ಚಿನ್ನಾಭರಣ ದೋಚಿ ಪರಾರಿ ಆಗಿದ್ದಾರೆ. ದರೋಡೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿದ್ದ ಬಾಲಕ, ದರೋಡೆಕೋರರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಆತನನ್ನು ತಳ್ಳಿ ದರೋಡೆ ನಡೆಸಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಷ್ಟು ಮೌಲ್ಯದ ಚಿನ್ನಾಭರಣ ದರೋಡೆ ನಡೆಸಲಾಗಿದೆ ಎಂಬುದು ಗೊತ್ತಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.