ADVERTISEMENT

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಿ: ಭಾಸ್ಕರ್ ರಾವ್

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 8:59 IST
Last Updated 11 ಮಾರ್ಚ್ 2020, 8:59 IST
   

ಪೀಣ್ಯದಾಸರಹಳ್ಳಿ: ‘ತರಗತಿಯಾಚೆಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸುವ ಕೆಲಸವನ್ನು ಶಿಕ್ಷಕರು ಮಾಡಬೇಕು’ ಎಂದು ಪೊಲೀಸ್‌ ಕಮಿಷನರ್‌ ಭಾಸ್ಕರ್ ರಾವ್ ಹೇಳಿದರು.

ಸಿಡೇದಹಳ್ಳಿಯ ಸೌಂದರ್ಯ ನಿರ್ವಹಣಾ ಮತ್ತು ವಿಜ್ಞಾನ ಸಂಸ್ಥೆಯು ಪೀಣ್ಯ ಇಂಡಸ್ಟ್ರಿ ಸಂಸ್ಥೆಯ ಸಹಯೋಗದೊಂದಿಗೆ ‘ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾಜಿಕ ಜವಾಬ್ದಾರಿ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜಕ್ಕೆ ನೇರವಾಗಿ ಉಪಯುಕ್ತವಾಗಬಹುದಾದ ವಿದ್ಯಾರ್ಥಿಗಳನ್ನು ತೊಡಗಿಸಬೇಕಾದ ಅಗತ್ಯವಿದೆ’ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸೌಂದರ್ಯ ಪಿ ಮಂಜಪ್ಪ, ಸಿಇಒ ಎಂ. ಕೀರ್ತನ್‌ಕುಮಾರ್, ವ್ಯವಸ್ಥಾಪಕ ಟ್ರಸ್ಟಿ ಎಂ. ವರುಣ್‌ಕುಮಾರ್, ಪ್ರಾಚಾರ್ಯ ಡಾ.ಸುರೇಶ್ ಸಿ.ಹೆಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.