
ಪ್ರಜಾವಾಣಿ ವಾರ್ತೆಪೀಣ್ಯ ದಾಸರಹಳ್ಳಿ: ಬೋನ್‌ಮಿಲ್‌ನಲ್ಲಿರುವ ಸ್ಮಾರ್ಟ್ ಪಾಯಿಂಟ್ ಕಟ್ಟಡದ ಸೆಕ್ಯೂರಿಟಿ ಗಾರ್ಡ್ ಸ್ವಾಮಿ (53) ಮೇಲೆ ಗೇಟ್ ಬಿದ್ದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋನ್ ಮಿಲ್‌ನಲ್ಲಿರುವ ಸ್ಮಾರ್ಟ್ ಪಾಯಿಂಟ್ ಕಟ್ಟಡದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸ್ವಾಮಿ ಕೆಲಸ ಮಾಡುತ್ತಿದ್ದರು. ಬೃಹತ್ ಗೇಟ್ ತೆಗೆಯುವ ಹಾಗೂ ಹಾಕುವ ಕೆಲಸಕ್ಕೆ ಅವರನ್ನು ನಿಯೋಜಿಸಲಾಗಿತ್ತು. ಬುಧವಾರ ರಾತ್ರಿ ಗೇಟ್ ತೆಗೆಯುವ ಸಂದರ್ಭದಲ್ಲಿ ಅವರ ಮೇಲೆಯೇ ಗೇಟ್ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಮಾಲೀಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ ಎಂದು ಸ್ವಾಮಿ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.