ಪೀಣ್ಯದಾಸರಹಳ್ಳಿ: ಪ್ರತಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಕ್ಕೆ ಬೆಂಬಲ ನೀಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಕೆಲಸ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಸ್ವದೇಶಿ ಜಾಗರಣ ಮಂಚ್-ಕರ್ನಾಟಕ ಆಯೋಜಿಸಿರುವ 5 ದಿನಗಳ ಸ್ವದೇಶಿ ಮೇಳ ಉದ್ಘಾಟಿಸಿ ಮಾತನಾಡಿದರು.
ಲಾಂಡ್ರಿ, ಸಲೂನ್, ಕಾರ್ಪೆಂಟರ್ ಸೇರಿ ದುಡಿಮೆದಾರರಿಗೆ ಕಾಯಕ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಆತ್ಮನಿರ್ಭರ ಯೋಜನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
‘ಭಾರತೀಯ ಸಂಸ್ಕೃತಿ ಗಟ್ಟಿಯಾಗಿ ಪ್ರತಿಪಾದಿಸುವ ಸ್ವದೇಶಿ ಜಾಗರಣ ಮಂಚ್ ಇದಾಗಿದೆ. 130 ಕೋಟಿ ಜನಸಂಖ್ಯೆಯುಳ್ಳ ಭಾರತೀಯ ಮಾರುಕಟ್ಟೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜತೆಗೆ ಭಾರತ, ಈಗ ವಿಶ್ವದಲ್ಲೇ ಹೆಚ್ಚು ರಫ್ತು ಮಾಡುವ ದೇಶ ಎಂಬ ಖ್ಯಾತಿಗೆ ಪಾತ್ರವಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.