ADVERTISEMENT

ಪಿಂಚಣಿಗೆ ನಿಗದಿಪಡಿಸಿರುವ ಆದಾಯ ಮಿತಿ ಹೆಚ್ಚಿಸಿ: ಪಿಂಚಣಿ ಪರಿಷತ್ತು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 15:59 IST
Last Updated 22 ಡಿಸೆಂಬರ್ 2025, 15:59 IST
<div class="paragraphs"><p>ಪಿಂಚಣಿ</p></div>

ಪಿಂಚಣಿ

   

ಐ ಸ್ಟಾಕ್‌ ಚಿತ್ರ

ಬೆಂಗಳೂರು: ಅಂಗವಿಕಲರ ವೇತನ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಮೈತ್ರಿ ಮತ್ತು ಮನಸ್ವಿನಿ ಸೇರಿದಂತೆ ವಿವಿಧ ಯೋಜನೆಗಳ ಅಡಿ ನೀಡುವ ಪಿಂಚಣಿಗೆ ಅರ್ಜಿ ಸಲ್ಲಿಸಲು ಇರುವ ಆದಾಯದ ಮಿತಿಯನ್ನು ₹32 ಸಾವಿರದಿಂದ ₹7 ಲಕ್ಷದವರೆಗೆ ವಿಸ್ತರಿಸಬೇಕು ಎಂದು ಪಿಂಚಣಿ ಪರಿಷತ್ತು ಆಗ್ರಹಿಸಿದೆ.

ADVERTISEMENT

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಸದಸ್ಯರಾದ ಸೌಮ್ಯಾ, ವೀರಯ್ಯ, ‘ಪಿಂಚಣಿದಾರರಿಗೆ ₹32 ಸಾವಿರ ಆದಾಯ ಮಿತಿಯನ್ನು ನಿಗದಿಪಡಿಸಿ, ಅರ್ಹರಿಗೆ ಪಿಂಚಣಿ ನೀಡಲು ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು. 

‘ಅರ್ಹ ಪಿಂಚಣಿದಾರರು ಸಲ್ಲಿಸಿದ 600ಕ್ಕೂ ಹೆಚ್ಚು ಅರ್ಜಿಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಪುರಸ್ಕರಿಸಬೇಕು. ಪಿಂಚಣಿಗೆ ಸಂಬಂಧಿಸಿದಂತೆ ನಡೆಯುವ ಅದಾಲತ್‌ಗಳ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ಎರಡು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕುಂದು ಕೊರತೆ ಸಭೆಗಳನ್ನು ನಡೆಸಬೇಕು’ ಎಂದು ಆಗ್ರಹಿಸಿದರು.

‘ಇದೇ 23ರಂದು ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.