ಬೆಂಗಳೂರು:ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡಿದೆ.
'ಡಿ.ಕೆ.ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರ ಇಲ್ಲ. ಆದರೆ ಹೆಚ್ಚು ಜನ ಸೇರಬಾರದೆಂದು ಹೇಳಿದ್ದೇನೆ. ದೂರವಾಣಿಯಲ್ಲಿ ನಿನ್ನೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ' ಎಂದು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:ಪದಗ್ರಹಣಕ್ಕೆ ಅನುಮತಿ ನಿರಾಕರಣೆ: 'ಮಾತು ತಪ್ಪಿದ ಯಡಿಯೂರಪ್ಪ'- ಶಿವಕುಮಾರ್ ಬೇಸರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.