ADVERTISEMENT

ಪಿಇಎಸ್‌ ವಿ.ವಿಯಿಂದ ಉಚಿತ ಸ್ಕೂಲ್‌ ಕಿಟ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 18:39 IST
Last Updated 2 ಡಿಸೆಂಬರ್ 2018, 18:39 IST

ಬೆಂಗಳೂರು: ಪಿಇಎಸ್‌ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶನಿವಾರಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್‌ ಹಾಗೂ ನೋಟ್‌ ಪುಸ್ತಕ ವಿತರಿಸಲಾಯಿತು.

ಸಮಾರಂಭದಲ್ಲಿನಗರ ಪೋಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ‘ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೆಟ್ಟವರ ಸಹವಾಸ ಮಾಡದೇ ಉತ್ತಮ ನಡವಳಿಕೆ ರೂಢಿಸಿಕೊಂಡರೆ ಉತ್ತಮ ಪ್ರಜೆಗಳಾಗಬಹುದು’ ಎಂದು ಅಭಿಪ್ರಾಯಪಟ್ಟರು.

ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್. ದೊರೆಸ್ವಾಮಿ ‘ಪಿಇಎಸ್ ಸಂಸ್ಥೆಯು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ದಶಕಗಳಿಂದ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲಾಗುತ್ತಿದೆ. ಆವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳು ಮತ್ತು ಬ್ಯಾಗ್‍ಗಳನ್ನು ನೀಡುವುದರ ಮೂಲಕ ನೆರವಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.