ADVERTISEMENT

ಕೃಷಿ ಮಸೂದೆಗಳಿಂದ ರೈತರ ಬೆನ್ನೆಲುಬು ನಾಶ:

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 21:39 IST
Last Updated 21 ಸೆಪ್ಟೆಂಬರ್ 2020, 21:39 IST

ಬೆಂಗಳೂರು: 'ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕಪಕ್ಷೀಯವಾಗಿ ಜಾರಿಗೊಳಿಸುತ್ತಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಭೂ ಒಡೆತನ, ಎಪಿಎಂಸಿ ಹಾಗೂ ವಿದ್ಯುತ್ ಖಾಸಗೀಕರಣ ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು' ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ರಾಜ್ಯ ಘಟಕದ ಅಧ್ಯಕ್ಷ ಯಾಸಿರ್ ಹಸನ್ ಆಗ್ರಹಿಸಿದ್ದಾರೆ.

'ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮೂಲಕ ರೈತರ ಭೂಮಿಯನ್ನು ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸುವ ಹುನ್ನಾರ ಮಾಡಿದೆ. ಸರ್ಕಾರದ ಈ ಸರ್ವಾಧಿಕಾರಿ ನಡೆಯು ದೇಶದ ರೈತರು, ಕಾರ್ಮಿಕರನ್ನು ಸಂಕಷ್ಟಕ್ಕೆ ಗುರಿ ಮಾಡಲಿದೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

' ಸರ್ಕಾರದ ದುರುದ್ದೇಶದಿಂದ ಕೂಡಿರುವ ಕೃಷಿ ಮಸೂದೆಗಳು, ದೇಶದ ಜೀವಾಳವಾಗಿರುವ ರೈತರ ಬೆನ್ನೆಲುಬನ್ನೇ ಮುರಿದು ಹಾಕಲಿವೆ. ಈ ಅಪಾಯಕಾರಿ ಕಾನೂನುಗಳ ಬಗ್ಗೆ ಜನರು ಜಾಗೃತರಾಗಬೇಕು. ಜನವಿರೋಧಿ ಕ್ರಮಗಳ ವಿರುದ್ಧ ರೈತಪರ ಹಾಗೂ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ಸಂಘಟನೆ ಬೆಂಬಲ ನೀಡಲಿದ್ದು, ಸರ್ಕಾರದ ಧೋರಣೆಗಳ ವಿರುದ್ಧ ದನಿ ಎತ್ತಲಿದೆ' ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.