ADVERTISEMENT

ಹಿಂದೂ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿ: ಪಿಎಫ್‌ಐ ಒತ್ತಾಯ

ಸಾರ್ವಜನಿಕ ಸ್ಥಳಗಳಲ್ಲಿ ತಲವಾರು ಪ್ರದರ್ಶನಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:12 IST
Last Updated 20 ಅಕ್ಟೋಬರ್ 2021, 16:12 IST
   

ಬೆಂಗಳೂರು: ‘ವಿಜಯ ದಶಮಿಯಂದು ಜನರಲ್ಲಿ ಭೀತಿ ಹುಟ್ಟಿಸುವಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು’ ಎಂದುಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಆಗ್ರಹಿಸಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ‘ಹಬ್ಬದ ದಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಸಂಘ ಪರಿವಾರದವರುಉಡುಪಿ, ಬೆಳಗಾವಿ, ವಿಜಯಪುರ, ದಾವಣಗೆರೆ, ನರಗುಂದ ಸೇರಿದಂತೆ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ತಲವಾರು, ಬಂದೂಕು, ಕೋವಿಯಂತಹ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದಾರೆ’ ಎಂದು ದೂರಿದರು.

ಬೆಂಗಳೂರು ವಿಭಾಗದ ಅಧ್ಯಕ್ಷ ಇಲ್ಯಾಸ್ ಮೊಹಮ್ಮದ್, ‘ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ ಪ್ರದರ್ಶನ ಕಾನೂನುಬಾಹಿರ. ರಾಜ್ಯದಲ್ಲಿ ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಮುಖ್ಯಮಂತ್ರಿಗಳು ಎಚ್ಚರ ವಹಿಸಬೇಕು. ಮಾರಕಾಸ್ತ್ರಗಳನ್ನು ಪ್ರದರ್ಶಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು’ ಎಂದೂ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.