ADVERTISEMENT

ಪಿಜಿ ಪ್ರವೇಶ: ದಿನಾಂಕ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 20:09 IST
Last Updated 18 ಡಿಸೆಂಬರ್ 2020, 20:09 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ. ಇದೇ 19ರಂದು ಜೇಷ್ಠತಾ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಈ ಪಟ್ಟಿಯಲ್ಲಿನ ದೋಷಗಳ ಬಗ್ಗೆ 24ರೊಳಗೆ ಅರ್ಜಿ ಸಲ್ಲಿಸಬೇಕು.

ಅಂತಿಮ ಜೇಷ್ಠತಾ ಪಟ್ಟಿಯನ್ನು ಡಿ.31ಕ್ಕೆ ಪ್ರಕಟಿಸಲಾಗುತ್ತದೆ. ಉಳಿದಂತೆ ವಿಜ್ಞಾನ, ವಾಣಿಜ್ಯ, ಕಲಾ ಮತ್ತು ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ದಿನಾಂಕಗಳನ್ನು ಸದ್ಯದಲ್ಲಿಯೇ ತಿಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT