ADVERTISEMENT

ಫೋನ್ ಕದ್ದಾಲಿಕೆ; ಡಿಸಿಪಿಯೇ ದೂರುದಾರ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 19:58 IST
Last Updated 20 ಆಗಸ್ಟ್ 2019, 19:58 IST
   

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್ ಆರ್‌. ಜೈನ್ ಅವರೇ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ’ ಎನ್ನಲಾದಫೋನ್ ಕದ್ದಾಲಿಕೆ ಪ್ರಕರಣ ಇದಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ನಿರ್ದೇಶನದಂತೆ ಡಿಸಿಪಿಕುಲದೀಪ್‌ ಕುಮಾರ್, ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.

ಇದೀಗ ಆ ವರದಿ ಉಲ್ಲೇಖಿಸಿಯೇ ಕುಲದೀಪ್‌ ಕುಮಾರ್ ದೂರು ನೀಡಿದ್ದಾರೆ. ಅದರ ಅನ್ವಯವೇ ಎಫ್‌ಐಆರ್‌ ದಾಖಲಾಗಿದ್ದು, ಈ ಪ್ರಕರಣವನ್ನೇ ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.