ADVERTISEMENT

ಅಪಾರ್ಟ್‌ಮೆಂಟ್‌ ಕಾಯ್ದೆ ಅನುಷ್ಠಾನ ಕೋರಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 20:58 IST
Last Updated 16 ಏಪ್ರಿಲ್ 2021, 20:58 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕರ ಸಂಘಗಳ ಕಾಯ್ದೆ ಅನುಷ್ಠಾನಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್‌ ಆದೇಶಿಸಿದೆ.

ಬೆಂಗಳೂರಿನ ವಕೀಲ ಎನ್. ಅಭಿಲಾಷ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಹಲವು ಅಪಾರ್ಟ್‌ಮೆಂಟ್ ಮಾಲೀಕರು ಕಾಯ್ದೆಯಡಿ ನಿಬಂಧನೆಗಳ ಅಡಿ ಸಂಘಗಳನ್ನು ನೊಂದಾಯಿಸಲು ಸಿದ್ಧರಿಲ್ಲ. ನಿಯಮಾವಳಿ ರೂಪಿಸಬೇಕು ಎಂಬ ಕಾಯ್ದೆಯಲ್ಲಿರುವ ಅಧಿಕಾರವನ್ನು ಸರ್ಕಾರ ಬಳಿಸಿಕೊಳ್ಳುತ್ತಿಲ್ಲ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

‘ಕಾಯ್ದೆಯಡಿ ನಿಯಮಗಳನ್ನು ರೂಪಿಸುವ ಅಧಿಕಾರ ಇದ್ದರೂ, ಸರ್ಕಾರ ಏಕೆ ಬಳಸಿಕೊಂಡಿಲ್ಲ. ಈ ಬಗ್ಗೆ ಆಕ್ಷೇಪಣಾ ಹೇಳಿಕೆ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.