
ಪಿಟಿಐಅತ್ಯಾಚಾರ
ಸಾಂದರ್ಭಿಕ ಚಿತ್ರ
ಹೈದರಾಬಾದ್: ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ ಪೈಲಟ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ಯಾಬಿನ್ ಸಿಬ್ಬಂದಿ ಇಲ್ಲಿನ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.
ನವೆಂಬರ್ 18ರಂದು ಬೆಂಗಳೂರಿನಲ್ಲಿ ಘಟನೆ ನಡೆದಿದೆ. ಬೇಗಂಪೇಟೆ ಠಾಣೆಯಲ್ಲಿ ಝೀರೊ ಎಫ್‌ಐಆರ್ (ಬೇರೊಂದು ಠಾಣೆಯ ವ್ಯಾಪ್ತಿಯಲ್ಲಿ ನಡೆದ ಅಪರಾಧದ ದೂರು) ದಾಖಲಾಗಿದೆ.
‘ಬೆಂಗಳೂರಿನಿಂದ ಮರಳಿದ ನಂತರ ಸಂತ್ರಸ್ತೆ, ಇಲ್ಲಿನ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡು ಅದನ್ನು ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಗೆ ವರ್ಗಾಯಿಸಿದ್ದೇವೆ. ಬೆಂಗಳೂರಿನ ಪೊಲೀಸರು ತನಿಖೆ ನಡೆಸಲಿದ್ದಾರೆ’ ಎಂದು ಬೇಗಂಪೇಟೆ ಠಾಣೆಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.