ADVERTISEMENT

ಮಹಿಳೆಯರಿಗಾಗಿ ಪಿಂಕ್ ಬಸ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 20:16 IST
Last Updated 14 ಜೂನ್ 2019, 20:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ವಿಶೇಷ ಪಿಂಕ್‌ ಬಸ್‌ಗಳ ಸಂಚಾರವನ್ನು ನಗರದಲ್ಲಿ ಆರಂಭಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮುಂದಾಗಿದೆ. ಇದಕ್ಕಾಗಿ ಸಂಸ್ಥೆಯು 47 ಹೊಸ ಬಸ್‌ಗಳನ್ನು ಖರೀದಿಸಲಿದೆ.

ನಿರ್ಭಯಾ ಯೋಜನೆಯಡಿ₹51 ಕೋಟಿ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಎ.ಸಿ ವ್ಯವಸ್ಥೆರಹಿತ ಈ ಬಸ್‌ಗಳಲ್ಲಿ ಮಹಿಳೆಯರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಮಹಿಳಾ ನಿರ್ವಾಹಕರನ್ನೇ ನಿಯೋಜಿಸಲಾಗುವುದು. ಜಿಪಿಎಸ್‌, ಸಿಸಿಟಿವಿ ಕ್ಯಾಮೆರಾ ಮತ್ತು ಪ್ಯಾನಿಕ್ ಬಟನ್‌ಗಳನ್ನು ಈ ಬಸ್‌ಗಳಲ್ಲಿ ಅಳವಡಿಸಲಾಗುತ್ತದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

2006-07ರಲ್ಲಿ ಮಹಿಳೆಯರಿಗಾಗಿ ವಿಶೇಷ ಬಸ್‌ಗಳ ಸೇವೆ ಆರಂಭಸಿದ್ದಬಿಎಂಟಿಸಿ, ನಂತರ ಸ್ಥಗಿತಗೊಳಿಸಿತ್ತು. ಇಂತಹ ಬಸ್‌ಗಳಿಗೆ ಮತ್ತೆ ಬೇಡಿಕೆ ಬಂದಿರುವ ಕಾರಣ ಪಿಂಕ್ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ವಿ. ಪ್ರಸಾದ್ ‘ಪ್ರಜಾವಾಣಿ’ಗೆ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.