ADVERTISEMENT

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 23:03 IST
Last Updated 13 ಡಿಸೆಂಬರ್ 2025, 23:03 IST
<div class="paragraphs"><p>ಎಂ.ಬಿ.ಪಾಟೀಲ</p></div>

ಎಂ.ಬಿ.ಪಾಟೀಲ

   

ಬೆಂಗಳೂರು: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಶನಿವಾರ ನಡೆದ ಪ್ಲಾಸ್ಟ್ ಇಂಡಿಯಾ-2026 ಪ್ರದರ್ಶನ ಮೇಳದ ಪೂರ್ವಭಾವಿ ಉದ್ಘಾಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ADVERTISEMENT

ಈ ವಲಯಕ್ಕೆ ಬೇಕಾದ ಪ್ರತಿಭಾವಂತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಂಶೋಧನೆಗಾಗಿ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಐಪಿಇಟಿ) ಇಲ್ಲಿ ತನ್ನ ಕ್ಯಾಂಪಸ್ ತೆರೆಯಲಿದೆ ಎಂದು ತಿಳಿಸಿದರು.

ದೇಶದಲ್ಲಿ ಪ್ಲಾಸ್ಟಿಕ್ ಉದ್ಯಮವು 40 ಲಕ್ಷ ಜನರಿಗೆ ಉದ್ಯೋಗ ನೀಡಿದೆ. ಮುಂದಿನ ಒಂದು ವರ್ಷದಲ್ಲಿ ಇನ್ನೂ 15 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದಲ್ಲಿ ಹೂಡಿಕೆದಾರರಿಗೆ ಆದ್ಯತೆ ಇದ್ದು, ಸಮಗ್ರ ಕೈಗಾರಿಕಾ ಬೆಳವಣಿಗೆಯ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

12ನೇ ವರ್ಷದ ಅಂತರರಾಷ್ಟ್ರೀಯ ಸಮಾವೇಶವು ಮುಂದಿನ ವರ್ಷ ಫೆ.5ರಿಂದ 10ರವರೆಗೆ ದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿದೆ.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಪಾಸ್ಟ್ ಇಂಡಿಯಾ ಫೌಂಡೇಶನ್ ಅಧ್ಯಕ್ಷ ರವೀಶ್ ಕಾಮತ್, ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಮುಖ್ಯಸ್ಥ ಅಲೋಕ್ ಟೈಬರ್ವಾಲಾ, ಪ್ಲಾಸ್ಟ್ ಇಂಡಿಯಾ ಫೌಂಡೇಷನ್‌ನ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಪ್ರದೀಪ್ ರಾಥೋಡ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.