ADVERTISEMENT

ಪ್ರಧಾನಿ ಮೋದಿ ಭೇಟಿ ನೀಡಿದ್ದ ಹಿನ್ನೆಲೆ: ಹಲವರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 15:31 IST
Last Updated 10 ಆಗಸ್ಟ್ 2025, 15:31 IST
<div class="paragraphs"><p> ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಾರೆ ಎಂಬ ಶಂಕೆಯ ಮೇಲೆ ಎನ್‌ಎಸ್‌ಯುಐ ಪದಾಧಿಕಾರಿಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಪಿ.ಬಸವರಾಜು ಆರೋಪಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಶುಕ್ರವಾರವಷ್ಟೇ ಕಾಂಗ್ರೆಸ್ ಪಕ್ಷವು ನಗರದಲ್ಲಿ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು. ಪದಾಧಿಕಾರಿಗಳು ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ವಶಕ್ಕೆ ಪಡೆದು, ಸಂಜೆ ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು.

ADVERTISEMENT

ಮೂವರ ಬಂಧನ:  ‘ರಾಗಿಗುಡ್ಡ ಮೆಟ್ರೊ ನಿಲ್ದಾಣ’ ಎಂದು ನಾಮಕರಣ ಮಾಡಿರುವುದನ್ನು ವಿರೋಧಿಸಿದ್ದ ಬಹುಜನ ಮಹಾ ಸಭಾ ಸಂಘಟನೆ ಕಾರ್ಯದರ್ಶಿ ಎಂ.ಪಿ.ನಂಜೇಶ್ ಕುಮಾರ್ ಸೇರಿ ಮೂವರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದರು.

‘ಮಾರೇನಹಳ್ಳಿ ಮೆಟ್ರೊ ನಿಲ್ದಾಣ’ ಎಂದು ಘೋಷಿಸುವಂತೆ ಆಗ್ರಹಿಸಿ ಸಂಘಟನೆಯ ಪದಾಧಿಕಾರಿಗಳು ಬಿಬಿಎಂಪಿ ದಕ್ಷಿಣ ವಲಯದ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಸ್ಥಳೀಯ ಶಾಸಕ ಸಿ.ಕೆ.ರಾಮಮೂರ್ತಿ ಸಹ ಮಾರೇನಹಳ್ಳಿ ಗ್ರಾಮಸ್ಥರಿಗೆ ಬೆಂಬಲ ನೀಡಿದ್ದರು.

ರಾಗಿಗುಡ್ಡ ಮೆಟ್ರೊ ನಿಲ್ದಾಣ ಎದುರು ಪ್ರತಿಭಟನೆಗೆ ಅನುಮತಿ ನೀಡುವಂತೆ ಕೋರಿ ಜೆ.ಪಿ.ನಗರ ಠಾಣೆಗೆ ತೆರಳಿದ್ದ ಸಂಘಟನೆಯ ಪದಾಧಿಕಾರಿಗಳಾದ ಎಂ.ಪಿ.ನಂಜೇಶ್ ಕುಮಾರ್, ಸುರೇಶ್ ಮತ್ತು ಮಣಿಕಂಠ ಅವರನ್ನು ಮುನ್ನೆಚ್ಚರಿಕೆಯಾಗಿ ಬಂಧಿಸಿ, ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಶನಿವಾರ ರಾತ್ರಿ ಮೂವರನ್ನು ಹನುಮಂತ ನಗರ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿತ್ತು. ಭಾನುವಾರ ಸಂಜೆ ಅವರನ್ನು ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.