ADVERTISEMENT

ಬಾಲಕಿಯ ಜೊತೆ ಸುತ್ತಾಟ: ಪೊಕ್ಸೊ ಅಡಿ ಬಂಧನ, ಪರೀಕ್ಷೆ ಬರೆಯಲು ಅನುಮತಿ

ಬಾಲಕಿಯ ಜೊತೆ ಸುತ್ತಾಟ: ಪೊಕ್ಸೊ ಅಡಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 7:15 IST
Last Updated 21 ಏಪ್ರಿಲ್ 2022, 7:15 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ಎಂಟನೇ ತರಗತಿ ಓದುತ್ತಿರುವಹುಡುಗಿಯನ್ನು ಪೋಷಕರ ಅನುಮತಿ ಇಲ್ಲದೆ ಪ್ರೀತಿ, ಪ್ರೇಮದ ನೆಪದಲ್ಲಿ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿ ಸುತ್ತಾಡಿಸಿಕೊಂಡು ಬಂದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

‘ಎರಡು ವಾರಗಳ ಹಿಂದೆ ಮನೆಯಲ್ಲಿ ಅಪ್ಪ–ಅಮ್ಮ ಇಲ್ಲದ ವೇಳೆ ತಂಗಿಯ ಇಚ್ಛೆಗೆ ವಿರುದ್ಧವಾಗಿ ಆರೋಪಿಗಳು ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿ ಸುತ್ತಾಡಿಸಿಕೊಂಡು ಬಂದಿದ್ದಾರೆ’ ಎಂದು ಸಂತ್ರಸ್ತೆಯ ಅಕ್ಕ ಇದೇ 14ರಂದು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಇಬ್ಬರು ಆರೋಪಿಗಳನ್ನುಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ರ (ಪೊಕ್ಸೊ) ಕಾಯ್ದೆ ಅಡಿಯಲ್ಲಿ ಬಂಧಿಸಿದ್ದರು.

ಮೊದಲ ಆರೋಪಿ ದ್ವಿತೀಯ ಪಿಯು ವಿದ್ಯಾರ್ಥಿ. ‘ಇದೇ 22ರಿಂದ ಪರೀಕ್ಷೆ ಆರಂಭವಾಗುತ್ತಿದ್ದು ನನಗೆ ಪರೀಕ್ಷೆ ಬರೆಯಲು ಅನುವಾಗುವಂತೆ ಜಾಮೀನು ನೀಡಬೇಕು’ ಎಂದು ಕೋರಿದ್ದರು.

ADVERTISEMENT

ಈ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.