ADVERTISEMENT

ಪೊಕ್ಸೊ: ಸಂತ್ರಸ್ತರಿಗೆ ನೋಟಿಸ್‌ ನಿರ್ದೇಶನ ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 16:19 IST
Last Updated 23 ಫೆಬ್ರುವರಿ 2022, 16:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಪೋಕ್ಸೊ ಪ್ರಕರಣದ ಆರೋಪಿಗಳು ಜಾಮೀನು ಕೋರಿ ನ್ಯಾಯಾಲಯಗಳಿಗೆ ಸಲ್ಲಿಸುವ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಮುನ್ನ ಕಡ್ಡಾಯವಾಗಿ ಸಂತ್ರಸ್ತರಿಗೆ ನೋಟಿಸ್ ನೀಡಲು ನಿರ್ದೇಶಿಸಬೇಕು‘ ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ನಗರದ ಬೀಬಿ ಆಯೆಷಾ ಖಾನುಂ, ದಿವ್ಯಾ ಕ್ರಿಸ್ಟೈನ್ ಹಾಗೂ ಪೆಂಚಿಲಮ್ಮ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.ಅರ್ಜಿದಾರರ ಪರ ವಕೀಲ ರೋಹನ್ ಕೊಠಾರಿ ವಾದ ಮಂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.