ADVERTISEMENT

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 17 ಜನವರಿ 2025, 16:09 IST
Last Updated 17 ಜನವರಿ 2025, 16:09 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರೈಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಸಂಬಂಧ ಯಡಿಯೂರಪ್ಪ ಸಲ್ಲಿಸಿರುವ ರಿಟ್‌ ಅರ್ಜಿ ಆಲಿಕೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಪೂರೈಸಿದರು.

ADVERTISEMENT

ಪ್ರಕರಣವೇನು?: ತಮ್ಮ ಮಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಹಾಯ ಮಾಡಬೇಕು ಎಂದು ಬೇಡಿ ಬಂದಿದ್ದ ಸಂತ್ರಸ್ತ ಬಾಲಕಿಯ ತಾಯಿ ನೀಡಿರುವ ದೂರಿನ ಅನುಸಾರ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ರೇವಣ್ಣ ವಿರುದ್ಧದ ಪ್ರಕರಣ ದೋಷಾರೋಪ ನಿಗದಿಗೆ ತಡೆ

ಬೆಂಗಳೂರು: ‘ಅತ್ಯಾಚಾರ ಸಂತ್ರಸ್ತೆಯ ಅಪಹರಣ ಆರೋಪ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪ ನಿಗದಿ ಮಾಡಬಾರದು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ರೇವಣ್ಣ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್‌ ವಾದ ಮಂಡಿಸಿ, ‘ವಿಚಾರಣಾ ನ್ಯಾಯಾಲಯದಲ್ಲಿ ಇದೇ 20 ರಂದು (ಸೋಮವಾರ) ದೋಷಾರೋಪ ನಿಗದಿಗೂ ಮುನ್ನ ವಾದ ಆಲಿಸಲು ಮುದ್ದತು ನಿಗದಿಗೊಳಿಸಲಾಗಿದೆ. ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ದೋಷಾರೋಪ ನಿಗದಿ ಮಾಡದಂತೆ ನಿರ್ಬಂಧಿಸಿ ಆದೇಶಿಸಬೇಕು’ ಎಂದು ಕೋರಿದರು.

ವಿಚಾರಣೆಯನ್ನು ಜ. 30ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.