
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೌಡಿಶೀಟರ್ ಸೇರಿ ನಾಲ್ವರು ಆರೋಪಿಗಳನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರೌಡಿಶೀಟರ್ ಶಾಜದ್ ಪಾಷಾ (25), ಈತನ ಸಹಚರರಾದ ಅನೀಸ್ ಪಾಷ, ಯಾಸೀನ್ ಅಹ್ಮದ್ ಶರೀಫ್ ಬಂಧಿತರು.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿತ್ತು. ಆರೋಪಿಗಳು ತಿಲಕನಗರದ ಕೃಷ್ಣಪ್ಪ ಗಾರ್ಡ್‌ನಲ್ಲಿ ಇರುವ ಮಾಹಿತಿ ಸಂಗ್ರಹಿಸಿದ್ದ ಕಲಾಸಿಪಾಳ್ಯ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಶಶಿಧರ್ ಮೊಕಾಶಿ, ಹರೀಶ್, ವೈ.ಬಿ. ರಂಗನಾಥ್ ಹಾಗೂ ಕಾನ್‌ಸ್ಟೆಬಲ್ ಮೌನೇಶ್ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.
ಮತ್ತೊಂದು ಪ್ರಕರಣದಲ್ಲಿ ಜಯನಗರ ಸಂಚಾರ ಠಾಣೆಯ ಸಿಬ್ಬಂದಿ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಿಲಕನಗರ ನಿವಾಸಿ ಪ್ರವೀಣ್(34) ಬಂಧಿತ ಆರೋಪಿ.
ಆರೋಪಿ ನ.5ರಂದು ಜಯನಗರ ಸಂಚಾರ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ್ದ. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.