ಬೆಂಗಳೂರು ಪೊಲೀಸ್
ಬೆಂಗಳೂರು: ನೇಮಕಾತಿ ವಿಭಾಗದ ಡಿಐಜಿ ಸಿ.ವಂಶಿ ಕೃಷ್ಣ ಅವರನ್ನು ನಗರದ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ಅಮಾನತು ಮಾಡಿದೆ. ಜಂಟಿ ಪೊಲೀಸ್ ಕಮಿಷನರ್ ಹಾಗೂ ಹೆಚ್ಚುವರಿ ಪೊಲೀಸ್ ಕಮಿಷನರ್ ಹುದ್ದೆಗಳು ಸಮಾನ ಎಂದು ಆದೇಶದಲ್ಲಿ ತಿಳಿಸಿದೆ.
ಲೋಕಾಯುಕ್ತ ಬೆಂಗಳೂರು ಘಟಕದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ–1) ಶ್ರೀನಾಥ ಮಹದೇವ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ಬಿಡುಗಡೆಗೊಳಿಸಿ ಲೋಕಾಯುಕ್ತರು ಆದೇಶಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಈ ಬೆಳವಣಿಗೆ ಹಲವು ಆಯಾಮಗಳನ್ನು ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.