ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರಿ ಸ್ವೀಕರಿಸಿದ ಬೆನ್ನಲ್ಲೇ ಭಾನುವಾರ ಅಧಿಕಾರಿಗಳ ಸರಣಿ ಸಭೆ ನಡೆಸಿದರು.
ಬೆಳಿಗ್ಗೆಯಿಂದ ಕಚೇರಿ ಆಡಳಿತ ವಿಭಾಗದ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಕಮಿಷನರ್, ಮಧ್ಯಾಹ್ನದ ಬಳಿಕ ಸಂಚಾರ ವಿಭಾಗ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ, ಎಸಿಪಿ ಮತ್ತು ಇನ್‌ಸ್ಪೆಕ್ಟರ್ ಹಂತದ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ರಿಯಲ್ ಎಸ್ಟೇಟ್ , ರೌಡಿಶೀಟರ್‌ಗಳು, ಕಾನೂನು ಬಾಹಿರ ಚಟುವಟಿಕೆಗಳ ನಡೆಸುವವರು, ಸೈಬರ್ ವಂಚಕರು, ಮಾದಕ ವಸ್ತು ಮಾರಾಟಗಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಜತೆಗೆ ರಿಯಲ್ ಎಸ್ಟೇಟ್ ಏಜೆಂಟ್ ರೀತಿ ಕೆಲಸ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ‘ರೌಡಿ, ಮಟ್ಕಾ, ಬೆಟ್ಟಿಂಗ್, ಮಾದಕ ವಸ್ತು ಮಾರಾಟ ನಿಯಂತ್ರಿಸಲು ಸೂಚಿಸಲಾಗಿದೆ. ಪೊಲೀಸರಿಗೆ ಸಾರ್ವಜನಿಕರ ಜತೆಗೆ ಉತ್ತಮ ಸಂಬಂಧ ಇರಬೇಕು. ಸಾಮಾನ್ಯ ಜನರಿಗೆ ಸ್ಪಂದಿಸುವ ಜನಸ್ನೇಹಿ ಪೊಲೀಸರಾಗಬೇಕು. ಇನ್ನು ಕೆಲವು ಹೊಸ ಠಾಣೆ ಬೆಂಗಳೂರು ನಗರಕ್ಕೆ ಸೇರಿಸಲಾಗಿದೆ. ಅಂತಹ ಠಾಣೆಗಳಿಗೆ ಹೆಚ್ಚುವರಿ ಅಧಿಕಾರಿ-ಸಿಬ್ಬಂದಿ ನೀಡಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.