ADVERTISEMENT

ಪೊಲೀಸ್ ಕಮಿಷನರ್ ಕಚೇರಿ ಗೃಹರಕ್ಷಕಿಗೂ ಕೊರೊನಾ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 12:38 IST
Last Updated 13 ಜುಲೈ 2020, 12:38 IST
   

ಬೆಂಗಳೂರು:ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೃಹ ರಕ್ಷಕಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಚೇರಿಯ ಮುಖ್ಯ ದ್ವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 35 ವರ್ಷದ ಗೃಹ ರಕ್ಷಕಿ, ಕಚೇರಿಗೆ ಬರುವವರನ್ನು ಪರಿಶೀಲಿಸುತ್ತಿದ್ದರು. ಇತ್ತೀಚೆಗೆ ಅವರ ಗಂಟಲಿನ ದ್ರವ ಪರೀಕ್ಷೆ ನಡೆಸಲಾಗಿತ್ತು. ಅದರ ವರದಿ ಪಾಸಿಟಿವ್ ಬಂದಿದೆ. ಇತ್ತೀಚೆಗಷ್ಟೇ ಕಮಿಷನರ್ ಕಚೇರಿಯಲ್ಲಿ 13 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT