ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ 6 ಕೆ.ಜಿ 55 ಗ್ರಾಂ ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 10:02 IST
Last Updated 21 ನವೆಂಬರ್ 2020, 10:02 IST
ಪೊಲೀಸರು ವಶಪಡಿಸಿಕೊಂಡಿರುವ ಚಿನ್ನಾಭರಣ
ಪೊಲೀಸರು ವಶಪಡಿಸಿಕೊಂಡಿರುವ ಚಿನ್ನಾಭರಣ   

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಕೆ.ಜಿ. 55 ಗ್ರಾಂ ಚಿನ್ನಾಭರಣವನ್ನು ಸಿಟಿ ಮಾರ್ಕೆಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಇಬ್ಬರು ಆರೋಪಿಗಳು, ಕೋರಿಯರ್ ಬ್ಯಾಗ್‌ನಲ್ಲಿ ಚಿನ್ನಾಭರಣ ಇಟ್ಟುಕೊಂಡು ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ದೊಡ್ಡಪೇಟೆ ವೃತ್ತದಲ್ಲಿ ಆರೋಪಿಗಳನ್ನು ತಡೆದು ವಿಚಾರಣೆ ನಡೆಸಿದಾಗ ಚಿನ್ನಾಭತಣ ಪತ್ತೆ ಆಗಿದೆ.

ಚಿನ್ನಾಭರಣ ಸಾಗಿಸುತ್ತಿದ್ದ ಆರೋಪಿಗಳಾದ ಮುಂಬೈನ ದಲ್ವತ್‌ಸಿಂಗ್ (34) ಹಾಗೂ ರಾಜಸ್ಥಾನದ ವಿಕಾಸ್ (35) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು, ಚಿನ್ನಾಭರಣಕ್ಕೆ ಯಾವುದೇ ದಾಖಲೆ ನೀಡಿಲ್ಲ. ಚಿನ್ನಾಭರಣ ಮೂಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.